ಸ್ಟಾರ್ಟಪ್ ರ್ಯಾಂಕಿಂಗ್ ನಲ್ಲಿ ಕರ್ನಾಟಕ ರಾಜ್ಯ ಅತ್ಯುತ್ತಮ ಸಾಧನೆ
ಭಾರತ ಸರ್ಕಾರದ ಕೈಗಾರಿಕೆ ಮತ್ತು ವ್ಯಾಪಾರ ಉತ್ತೇಜನ ಇಲಾಖೆಯು ಬಿಡುಗಡೆ ಮಾಡಿರುವ ಸ್ಟಾರ್ಟಪ್ ರ್ಯಾಂಕಿಂಗ್ ನಲ್ಲಿ ಕರ್ನಾಟಕ ರಾಜ್ಯವು ‘ಎ’ ವರ್ಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಪ್ರಮಾಣಪತ್ರವನ್ನು ಐಟಿ/ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸ್ಟಾರ್ಟಪ್ ರ್ಯಾಂಕಿಂಗ್ ನಲ್ಲಿ ಕರ್ನಾಟಕ ರಾಜ್ಯ ಅತ್ಯುತ್ತಮ ಸಾಧನೆವರಿಗೆ ಹಸ್ತಾಂತರಿಸಿದರು. ಐಟಿ ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಹಾಗೂ ಇಲಾಖೆಯ ನಿರ್ದೇಶಕರಾದ ಮೀನಾ ನಾಗರಾಜ್ ಉಪಸ್ಥಿತರಿದ್ದರು.