16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಆರಂಭಿಸಿ, ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು. ಸಾಮಾಜಿಕ ನ್ಯಾಯದ ತಳಹದಿ ಭದ್ರವಾಗಿ ಇರಿಸುವುದೇ ನಮ್ಮ ಸರ್ಕಾರದ ಧ್ಯೇಯದ ನಿಟ್ಟಿನಲ್ಲಿ ಬಜೆಟ್ ರೂಪಿಸಲಾಗಿದೆ. ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ ಎಂದು ಹೇಳಿದರು.
2030ರ ವೇಳೆಗೆ ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಯೊಂದಿಗೆ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಸಿಎಂ ಹೇಳಿದರು.
ಬೆಂಗಳೂರು ಟನಲ್ ಯೋಜನೆಗೆ 40 ಸಾವಿರ ರೂ. ಕೋಟಿ ಅನುದಾನ ಪ್ರಕಟಿಸಿದರು.
ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.