Menu

ಕರ್ನಾಟಕ ಬಜೆಟ್ 2026: ನೀರಾವರಿ, ಕೃಷಿಗೆ ಆದ್ಯತೆ ಪ್ರಕಟಿಸಿದ ಸಿಎಂ

ಕರ್ನಾಟಕ ಬಜೆಟ್ 2026ರ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೃಷಿ ಮತ್ತು ನೀಎಆವರಿಗೆ ಆದ್ಯತೆ ನೀಡಿದ್ದಾರೆ. ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಎರಡನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ ಎಂದು ಘೋಷಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ – ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಕೃಷ್ಣಾ, ಕಾವೇರಿ, ಗೋದಾವರಿ ಸೇರಿ ನದಿ ಕಣಿವೆಗಳಲ್ಲಿ ಒಟ್ಟಾರೆ ರೂ. 8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣಗೊಳಿಸುವುದಾಗಿ ಪ್ರಕಟಿಸಿದ್ದಾರೆ.

ಸಣ್ಣ, ಅತಿ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು. ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ MSIL ವತಿಯಿಂದ ರೈತ ಮಾಲ್‌ಗಳ ಸ್ಥಾಪನೆಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ ಪ್ರಕಟಿಸಿದ್ದಾರೆ.

ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಣೆ ವೆಚ್ಚ 20 ರೂ.ಗೆ ಹೆಚ್ಚಳ, ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ, ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ026-27 ನೇ ಸಾಲಿನಲ್ಲಿ ನಬಾರ್ಡ್‌ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ, ರೂ.10 ಕೋಟಿ ವೆಚ್ಚದಲ್ಲಿ 15 ತಾಲೂಕು ಪಶು ಆಸ್ಪತ್ರೆಗಳು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಘೋಷಿಸಿದ್ದಾರೆ.

ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ, ಜಾನುವಾರು ಸಂತಾನೋತ್ಪತ್ತಿ ಸಮಸ್ಯೆ ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರ, ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳವಾಗಲಿದೆ ಎಂದು ಬಜೆಟ್‌ನಲ್ಲಿ ಹೇಳಿದ್ದಾರೆ. .

ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆ ನಿರ್ಮಾಣ, 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಇದೆ ಎಂದು ಸಿಎಂ ತಿಳಿಸಿದ್ದಾರೆ.

ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ಸೇವೆಗಳನ್ನು (ಕಾಯ್ದೆಗಳು) ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಕ್ರಮ, ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್‌) ಮತ್ತು ಹುಬ್ಬಳ್ಳಿ (ಕಾಟನ್‌ ಮಾರ್ಕೆಟ್‌) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಪ್ರಕಟಿಸಲಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು 10 ಕೋಟಿ ರೂ. ವೆಚ್ಚದಲ್ಲಿ ವ್ಯವಸ್ಥೆ ಜಾರಿ, ಕೃಷಿ ಬೆಳೆಗಳ ಮೌಲ್ಯವರ್ಧನೆ ಹಾಗೂ ಕೃಷಿ ತ್ಯಾಜ್ಯ ಮರುಬಳಕೆ ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆ ಜಾರಿಗೆ 100 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Related Posts

Leave a Reply

Your email address will not be published. Required fields are marked *