Menu

ಕರ್ನಾಟಕ ಬಜೆಟ್ 2026: ಮೈಸೂರು ರಾಜ್ಯದ ಎರಡನೇ ಐಟಿ ಸಿಟಿ

ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮೈಸೂರನ್ನು ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದರೊಂದಿಗೆ ಇತರ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಂತಹ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕಿಯೋನಿಕ್ಸ್ ಮೂಲಕ ಇನ್‌ಕ್ಯುಬೇಷನ್ ಸೌಲಭ್ಯಗಳು ಮತ್ತು ಕ್ಲೀನ್ ಲ್ಯಾಬ್‌ ಸ್ಥಾಪನೆ, ರಾಜ್ಯದಲ್ಲಿ ESDM ಮತ್ತು ಸೆಮಿಕಂಡಕ್ಟರ್ ವಲಯಕ್ಕೆ ಬೃಹತ್ ಕಂಪನಿಗಳಿಂದ 45,000 ಕೋಟಿ ರೂ. ಹೂಡಿಕೆ ನಿರೀಕ್ಷೆ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್ ಕ್ಷೇತ್ರಗಳಲ್ಲಿ ಐಐಎಸ್ಸಿ, ಇಸ್ರೋ ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಕ್ಯಾಂಪಸ್, ರಾಯಚೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪಿಸಲಾಗುವುದು. 2029 ರ ವೇಳೆಗೆ 500 ಹೊಸ ಜಿಸಿಸಿಗಳನ್ನು ಸ್ಥಾಪಿಸಿ 3.5 ಲಕ್ಷ ಉದ್ಯೋಗ ಸೃಷ್ಟಿಯ ಗುರಿಗಳನ್ನು ಹೊಂದಿರುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

KIADB ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ಯಾಪಿಂಗ್‌ ಸೌಲಭ್ಯ ಘಟಕ, 500 ಕೋಟಿ ರೂ.ಗಳ ವೆಚ್ಚದಲ್ಲಿ ಮಂಡ್ಯದಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕ ಸ್ಥಾಪನೆಗೆ 100 ಎಕರೆ ಜಮೀನು. KIADB ಏರೋಸ್ಪೇಸ್ ಪಾರ್ಕ್‌ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಸ್ಥಾಪನೆಗೆ 30 ಕೋಟಿ ರೂ. ಘೋಷಣೆಯಾಗಿದೆ.

ಸಮ್ಮೇಳನ/ಶೃಂಗಸಭೆಗಳ (MICE) ಆಯೋಜನೆಗಾಗಿ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ ಆವರಣದಲ್ಲಿ PPP ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಕೇಂದ್ರ ಸಂಕೀರ್ಣ ನಿರ್ಮಾಣ. ಬೆಳಗಾವಿ ಜಿಲ್ಲೆಯಲ್ಲಿ 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್‌ ಅಭಿವೃದ್ಧಿ. ಮೈಸೂರು ವಿಮಾನ ನಿಲ್ದಾಣದ ಸನಿಹ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ, NGEF ಆವರಣದಲ್ಲಿ ಟೀ ಪಾರ್ಕ್ ಯೋಜನೆಯ ಮೊದಲನೆಯ ಹಂತದ ಲೋಕಾರ್ಪಣೆ ಹಾಗೂ ಎರಡನೇ ಹಂತದಡಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪ್ರಕಟಿಸಲಾಗಿದೆ.

ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಗೆ 600 ಕೋಟಿ ರೂ., MSE-CDP ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ 10 ಕ್ಲಸ್ಟರ್‌ಗಳ ಸ್ಥಾಪನೆ, ನೇಕಾರರ ಆರ್ಥಿಕ ಸ್ವಾವಲಂಬನೆಗೆ ಒಟ್ಟಾರೆಯಾಗಿ 225 ಕೋಟಿ ರೂ. ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್‌ಗೆ 3 ರೂ.ರಂತೆ ವಿದ್ಯುತ್‌ ಸಹಾಯಧನವನ್ನು ಬಜೆಟ್‌ನಲ್ಲಿ ನಿಗದಿಗೊಳಿಸಲಾಗಿದೆ.

ಕಲಬುರಗಿಯಲ್ಲಿ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್‌ಗೆ 75 ಕೋಟಿ ರೂ. ಅನುದಾನ. 2025-26 ಸಾಲಿನ ಸಕ್ಕರೆ ಹಂಗಾಮಿನಲ್ಲಿ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 50 ರೂ.ಗಳ ಸಹಾಯಧನ, ಒಟ್ಟಾರೆಯಾಗಿ 300 ಕೋಟಿ ರೂ. ಒದಗಿಸಲಾಗಿದೆ.
ರಾಜ್ಯಕ್ಕೆ ನಿಗದಿಪಡಿಸಲಾದ ಎಥನಾಲ್ ಖರೀದಿ ಕೋಟಾ, ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಕಡಿಮೆಯಾಗಿರುವುದರಿಂದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ. ಲೋಕೋಪಯೋಗಿ ಇಲಾಖೆ ಮುಂದಿನ ಎರಡು ವರ್ಷಗಳಲ್ಲಿ 2,000 ಕೋಟಿ ರೂ. ಮೊತ್ತದಲ್ಲಿ ಸೇತುವೆಗಳ ನಿರ್ಮಾಣ, ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನವಸತಿಗಳಿಗೆ ಸಂಪರ್ಕ ಕಲ್ಪಿಸುವ 300 ಫುಟ್ ಬ್ರಿಡ್ಜ್ ಗಳ ನಿರ್ಮಾಣ, ಇಲಾಖೆಯ ಆಸ್ತಿಗಳ ಡಿಜಿಟಲೀಕರಣ, ಸಂರಕ್ಷಿಸಲು ರೆಕಾರ್ಡ್ ರೂಮ್ ನಿರ್ಮಾಣ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5 ಘಟ್ಟ-2ರಡಿ 5,000 ಕೋಟಿ ರೂ. ಮೊತ್ತದಲ್ಲಿ 1846 ಕಿಮೀ ರಸ್ತೆಯ ಅಭಿವೃದ್ಧಿ. ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ರಾಜ್ಯ ಹೆದ್ದಾರಿ 3,500 ಕಿ.ಮೀ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ ಸಿಎಂ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *