ಕರ್ನಾಟಕ ಬಜೆಟ್ 2026ರಲ್ಲಿ ಬೆಂಗಳೂರು ಅಭಿವೃದ್ಧಿಗೆ ಏಳು ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿ ಅನುದಾನ ಘೋಷಿಸಲಾಗಿದೆ. 158 ಕಿ.ಮೀ ವೈಟ್ ಟಾಪಿಂಗ್ ಆಗಲಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.
ಬೆಂಗಳೂರಿನ ಕರಗ ಉತ್ಸವಕ್ಕೆ 2 ಕೋಟಿ ಅನುದಾನ ಮೀಸಲು ಇಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಿಸಿ ಶಾಂತವೇರಿ ಗೋಪಾಲಗೌಡ ಹೆಸರು ನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್ಪೋರ್ಟ್ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಎತ್ತಿನಹೊಳೆ ನೀರು ಸಂಗ್ರಹಣೆಗಾಗಿ ಜಲಾಶಯ ನಿರ್ಮಾಣ, ಕೋಲಾರದಲ್ಲಿ ಪ್ರಾಯೋಗಿಕ ರೈತ ಮಾಲ್ ಸ್ಥಾಪನೆ, ತುಮಕೂರು ಗುಬ್ಬಿ ವೀರಣ್ಣ ಕಲಾಕ್ಷೇತ್ರದ ನವೀಕರಣ, ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ 2 ಕೋಟಿ, ಮೈಸೂರಿನ ಕಾವಾದಲ್ಲಿ ಹವ್ಯಕ ಭಾಷಾ ಅಕಾಡೆಮಿ, ದಲಿತ ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಟ್ರಸ್ಟ್, ಡಾ.ಡಿ.ಆರ್.ನಾಗರಾಜು ಟ್ರಸ್ಟ್ ಸ್ಥಾಪನೆಗೆ ನಿರ್ಧಾರ, ದಲಿತ ಸಾಹಿತ್ಯ ಪುಸ್ತಕ ಪ್ರಕಟಣೆಗೆ 1 ಕೋಟಿ, ಗೋರ್ ಬಂಜಾರ ವಿಶ್ವಕೋಶ ಪ್ರಕಟಣೆ, ಕುವೆಂಪು ವಿವಿಯಲ್ಲಿ ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ, ಸಂತ ಶಿಶುನಾಳ ಷರೀಫ್ ಹೆಸರಿನಲ್ಲಿ ಪ್ರತಿಷ್ಠಾನ, ಬೆಳವಡಿ ಮಲ್ಲಮ್ಮ ಹೆಸರಲ್ಲಿ ಪ್ರತಿಷ್ಠಾನ, ಜಿಎಸ್ ಶಿವರುದ್ರಪ್ಪ ಹೆಸರಿನಲ್ಲಿ ಪ್ರಶಸ್ತಿ ನೀಡಿಕೆಗೆ 2 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಪ್ರಕಟಿಸಿದ್ದಾರೆ.


