Menu

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವುದನ್ನು ತಡೆಯುವ ನಿಟ್ಟಿನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮಂಡನೆ ವೇಳೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದಿದ್ದಾರೆ.

18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮುಖ್ಯ ಎಂದು ಸರ್ಕಾರ ಹೇಳಿದೆ.

ಅಬಕಾರಿ ಸುಂಕ ದರ ನಿಗದಿ ಸ್ಲ್ಯಾಬ್ ಇಳಿಕೆ ಮಾಡಲಾಗಿದ್ದು, ಮದ್ಯಪ್ರಿಯರಿಗೆ ಕೊಂಚ ನಿರಾಳ ಸಿಗಬಹುದಾಗಿದೆ. 16 ಸ್ಲಾಬ್ ಬದಲು 8 ಸ್ಲ್ಯಾಬ್ ಮೂಲಕ ತೆರಿಗೆ ಸಂಗ್ರಹ ಮಾಡಲು ಸರ್ಕಾರ ನಿರ್ಧರಿಸಿದೆ. ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಿಸಲಾಗುವುದು. ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶದ ಆದಾರದ ಮೇಲೆ ಅಬಕಾರಿ ಸುಂಕ ನಿರ್ಧಾರ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ.

ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಿದ್ದು, ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್, ಮೀನು ಮಾರಾಟ ಮಾಡಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆ ನಿವಾರಿಸಲು 10 ಕೋಟಿ ರೂ. ಮೀಸಲು ಪ್ರಕಟಿಸಲಾಗಿದೆ.

Related Posts

Leave a Reply

Your email address will not be published. Required fields are marked *