ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿಗಳು ಸಮೀಕ್ಷೆ ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ತಿಳಿಸಿದರು.
ಸಚಿವ ಸಂಪುಟದ ಸಭೆ ನಂತರ ಮಾತನಾಡಿದ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇದ್ದರೆ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸಮೀಕ್ಷೆ ಮುಂದುವರಿಸಲು ಅವಕಾಶ ನೀಡಿದ ಕೋರ್ಟ್ ಹಿಂದುಳಿದ ವರ್ಗಗಳ ಆಯೋಗಕ್ಕೆ ‘ಕೆಲವು ಕಠಿಣ ಷರತ್ತುಗಳನ್ನು’ ವಿಧಿಸಿದೆ.
ಹೈಕೋರ್ಟ್ ವಿಧಿಸಿದ 5 ಷರತ್ತುಗಳು
- ಸಂಗ್ರಹಿಸಿದ ದತ್ತಾಂಶವನ್ನು ಆಯೋಗ ಅಥವಾ ಸರ್ಕಾರ ಸೇರಿದಂತೆ ಯಾರಿಗೂ ಬಹಿರಂಗಪಡಿಸಬಾರದು.
- ಆಯೋಗ ದತ್ತಾಂಶದ ಗೌಪ್ಯತೆಯನ್ನು ರಕ್ಷಿಸಬೇಕು.
- ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.
- ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
- ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಸೂಚಿಸಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯ ದ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿ ತಿಗತಿಗಳ ಬಗ್ಗೆ ನಿಖರಮಾಹಿತಿ ಸಂಗ್ರಹಿಸಲು ಒಂದು ಮಹತ್ವಾ ಕಾಂಕ್ಷೆಯಯೋಜನೆಯಾದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025” ಅನ್ನು ಕರ್ನಾಟಕ ರಾಜ್ಯ ಹಿಂದುಳಿದವರ್ಗಗಳ ಆಯೋಗದ ಮೂಲಕ ನಡೆಸುತ್ತಿದೆ.