ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ.
ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.
ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು ಕ್ರಮ ಜರುಗಿಸತಕ್ಕುದಲ್ಲವೆಂದು ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ.
ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ. ಹೀಗಾಗಿ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದಿದೆ. ಇನ್ನು ಈ ವರದಿಯನ್ನು ವಿರೋಧಿಸುವುದಿದ್ದರೆ ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಿದೆ.
ಪ್ರಕರಣದ ಆರೋಪಿ 1ರಿಂದ ಆರೋಪಿ 4ರವರೆಗಿನ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿರುವುದಿಲ್ಲ. ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ರಿಂದ 2024ರವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನ ನೀಡಿರುವ ಆರೋಪಗಳಿವೆ. ಈ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಅಂತಿಮ ವರದಿ ಕೋರ್ಟ್ಗೆ ಸಲ್ಲಿಸುತ್ತೇವೆ ಎಂದು ದೂರುದಾರ ಸ್ನೇಹಮಯಿ ಕೃಷ್ಣಗೆ ನೀಡಿರುವ ನೋಟಿಸ್ನಲ್ಲಿ ಲೋಕಾಯುಕ್ತ ಉಲ್ಲೇಖಿಸಿದೆ.