ದೆಹಲಿ, ಫೆ.18, ಉದಯಕಾಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದ್ದು, ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಧಿಸಿದಂತೆ ಹೈಕೋರ್ಟ್ಗೆ ಸಲ್ಲಿಸಿದ್ದ ಎಸ್ಐಟಿ ವರದಿಗೆ ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಎಸ್ಐಟಿ ಪ್ರಕರಣದ ಕುರಿತು ತನಿಖೆ ನಡೆಸಿ ರಮೇಶ್ ಜಾರಕಿಹೊಳಿಗೆ ಕ್ಲೀನ್ಚೀಟ್ ನೀಡಿ ಹೈಕೋರ್ಟ್ಗೆ ಬಿ ರಿಪೋರ್ಟ್ ವರದಿ ಸಲ್ಲಿಸಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂತ್ರಸ್ತೆ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಳು. ಇದೀಗ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ಎಸ್ಐಟಿ ಸಲ್ಲಿಸಿದ್ದ ವರದಿಗೆ ತಡೆಯಾಜ್ಞೆ ನೀಡಿದೆ.
ಎಸ್ಐಟಿ ರಚನೆಯೇ ಸರಿಯಿಲ್ಲ. ತನಿಖೆ ಸಮರ್ಪಕವಾಗಿ ನಡೆದಿಲ್ಲ ಯಾವುದೇ ನಿಯಮಾವಳಿಗಳನ್ನ ಪಾಲಿಸಲಾಗಿಲ್ಲ ಎಂದು ಸಂತ್ರಸ್ತೆ ಪರ ವಕೀಲರು ವಾದಿಸಿದ್ದರು. ಇದನ್ನ ಆಲಿಸಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯಿಂದ ರಮೇಶ್ ಜಾರಕಿಹೊಳಿಗೆ ಹಿನ್ನೆಡೆ ಆಗಿದೆ.