Thursday, September 11, 2025
Menu

ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ: ಸಚಿವ ಸಂಪುಟ ತೀರ್ಮಾನ

karnataka ratna

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಮೇರು ಕಲಾವಿದರಿಗೆ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಕನ್ನಡ ಚಿತ್ರರಂಗಕ್ಕೆ ನೀಡಿದ ಅಮೋಘ ಸೇವೆಯನ್ನು ಗುರುತಿಸಿ ಈ ಇಬ್ಬರು ಕಲಾವಿದರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.

ಇತ್ತೀಚೆಗೆ ನಟ ಹಾಗೂ ಅಳಿಯ ಅರವಿಂದ್, ಪತ್ನಿ ಭಾರತಿ, ಮಾಳವಿಕಾ, ಜಯಮಲಾ, ಶ್ರುತಿ ಸೇರಿದಂತೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು.

Related Posts

Leave a Reply

Your email address will not be published. Required fields are marked *