2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ.
ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ(ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ(ಶೇ.82.21), ಕಲಬುರಗಿ ಕೊನೆಯ ಸ್ಥಾನ(ಶೇ42.43) ಪಡೆದುಕೊಂಡಿದೆ. ಸರ್ಕಾರಿಯ ಆರು, ಅನುದಾನಿತ 30 ಮತ್ತು ಅನುದಾನ ರಹಿತ 108 ಶಾಲೆಗಳು ಸೇರಿದಂತೆ ಒಟ್ಟು 144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.
2025 ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದೆ, 4,61563 ಹುಡುಗರು ಮತ್ತು 4,34,884 ಹುಡಗಿಯರು ಹಾಜರಾಗಿದ್ದರು. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದು. karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, “SSLC ಫಲಿತಾಂಶ 2025” ಎಂಬ ಲಿಂಕ್ ಕ್ಲಿಕ್ ಮಾಡಬೇಕು.