ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದು, ಪ್ರಕರಣದಲ್ಲಿ ನ್ಯಾಯಮೂರ್ತಿಯ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದಲ್ಲಿ ವಿಚಾರಣೆಗೆ ಬಂದಿದೆ. ಶೀಘ್ರ ವಿಚಾರಣೆ ನಡೆಯಲಿದೆ ಎಂದು ಸಿಜೆಐ ತಿಳಿಸಿದ್ದಾರೆ.