ಕೆಜಿಎಫ್, ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಸಹ ನಿರ್ದೇಶಕರ ನಾಲ್ಕೂವರೆ ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ಸಂಭವಿಸಿದೆ.
ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ಪುತ್ರಿ ಸೋನಾರ್ಷ್ ನಾಡಗೌಡ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಘಟನೆಗೆ ಆಘಾತ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಲಾರ್, ಕೆಜಿಎಫ್ ಚಿತ್ರಗಳಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಸಹ ನಿರ್ದೇಶಕರಾಗಿ ದುಡಿದಿದ್ದ ಕೀರ್ತನ್ ನಾಡಗೌಡ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರದ ಮೂಲಕ ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಿರ್ದೇಶಕರಾಗಲು ಸಿದ್ಧತೆ ನಡೆಸಿದ್ದರು.
ಸಿನಿಮಾ ನಿರ್ದೇಶನದ ಬಗ್ಗೆ ಹೈದರಾಬಾದ್ ಗೆ ಕುಟುಂಬ ಸಮೇತರಾಗಿ ತೆರಳಿದ್ದಾಗ ಸೋಮವಾರ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.


