Menu

ಗಣಿಗಳಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಾಟ ಮಾಡಿದ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಮಾಡಿ  ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್​ನ ಅಹಮದಾಬಾದ್​​ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ  ಮಲ್ಲಿಕಾರ್ಜುನ ಖರ್ಗೆ , ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾ ಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ದುರ್ಬಲಗೊಳಿಸಲಾಗುತ್ತಿದೆ. ಇದು ಹೀಗೇ ಮುಂದುವರಿದರೆ, ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಿ ಹೊರಟು ಹೋಗುತ್ತಾರೆ ಎಂದು ದೂರಿದರು.

ಆರು ದಶಕಗಳ ಬಳಿಕ ಮೊದಲ ಬಾರಿಗೆ ನಗರದಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,ವಿಮಾನ ನಿಲ್ದಾಣಗಳು, ಬಂದರುಗಳು, ಗಣಿಗಾರಿಕೆ, ಮಾಧ್ಯಮ ಹೀಗೆ ಎಲ್ಲವನ್ನೂ ಮೋದಿ ತನ್ನ ಕೈಗಾರಿಕೋದ್ಯಮಿ ಸ್ನೇಹಿತರಿಗೆ ಹಸ್ತಾಂತರಿಸುತ್ತಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತ ದೇಶದಲ್ಲಿನ ನಿರುದ್ಯೋಗದಿಂದ ತಪ್ಪಿಸಿಕೊಳ್ಳಲು ಶ್ರೀಮಂತರು ಮತ್ತು ಯುವಕರು ದೇಶವನ್ನು ತೊರೆಯುತ್ತಿದ್ದಾರೆ. ಶ್ರೀಮಂತರು ವಿದೇಶಗಳಲ್ಲಿ ನೆಲೆಸುತ್ತಿದ್ದಾರೆ. ನಿರುದ್ಯೋಗದಿಂದ ತಪ್ಪಿಸಿಕೊಳ್ಳಲು ವಿದೇಶಗಳಿಗೆ ಹೋದ ಯುವಕರನ್ನು ಸರಪಳಿಯಲ್ಲಿ ಬಂಧಿಸಿ ವಾಪಸ್ ಕಳುಹಿಸಲಾಗುತ್ತಿದೆ. ಆದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಭಾರತದ ಅಭಿವೃದ್ಧಿ 2014ರ ನಂತರವೇ ಪ್ರಾರಂಭವಾಯಿತು ಎಂದು ಆಡಳಿತ ಪಕ್ಷ ಪದೇ ಪದೇ ಹೇಳಿಕೊಳ್ಳುತ್ತಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಕ್ಫ್​ ಬೋರ್ಡ್​ನಲ್ಲಿ​ ಮುಸ್ಲಿಮೇತರರು ಸದಸ್ಯರಾಗುವುದಕ್ಕೆ ಸಾಧ್ಯವಿಲ್ಲ. ಹಿಂದೂ ಬೋರ್ಡ್​​ನಲ್ಲೂ ಹಿಂದೂಯೇತರರು ಸದಸ್ಯರಾಗಲು ಬರುವುದಿಲ್ಲ. ವಕ್ಫ್​ ಬೋರ್ಡ್​ ವಿಚಾರದಲ್ಲಿ ನಮ್ಮೆಲ್ಲರ ನಿರ್ಣಯ ಒಂದೇ ಆಗಿದೆ. ವಕ್ಫ್ ಬೋರ್ಡ್​​​ ಆಸ್ತಿಯನ್ನು ಯಾರೂ ಕಸಿದುಕೊಳ್ಳಲು ಬರುವುದಿಲ್ಲ. ಮುಂಬರುವ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಗುಜರಾತ್​ನ ಅಹಮದಾಬಾದ್​​ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *