ಟಾಕ್ಸಿಕ್ ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ನಟ ಯಶ್ ಹಂಚಿಕೊಂಡಿದ್ದಾರೆ. ಟಾಕ್ಸಿಕ್ ನಲ್ಲಿ ‘ನಾಡಿಯಾ’ ಪಾತ್ರದಲ್ಲಿ ಕಿಯಾರಾ ಅಭಿನಯಿಸಿದ್ದಾರೆ. ಸ್ಟೇಜ್ ಲೈಟ್ಸ್ ಮಧ್ಯೆ ನಿಂತಿರುವ ಕಿಯಾರಾ ಗ್ಲಾಮರ್, ಡಾರ್ಕ್ ಫೇರಿಟೇಲ್ ಲುಕ್‌ನಲ್ಲಿ ಕಂಗೊಳಿಸಿದ್ದಾರೆ.
ಟಾಕ್ಸಿಕ್ ಸೆಟ್ ನಲ್ಲಿ ಯಶ್ ಜೊತೆ ಕಿಯಾರಾ ಕಾಣಿಸಿಕೊಂಡಿದ್ದ ಫೋಟೋ ವೈರಲ್ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಅಧಿಕೃತವಾಗಿ ಕಿಯಾರಾ ಫಸ್ಟ್ ಲುಕ್ ಪೋಸ್ಟರ್ ಅನ್ನು ಯಶ್ ಹಂಚಿಕೊಂಡಿದ್ದಾರೆ. ಗೀತು ಮೋಹನ್ ದಾಸ್ ನಿರ್ದೇಶನದ ಜೊತೆಗೆ ಯಶ್ ಕಥೆ ರಚಿಸಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜನೆ ಇದೆ.
ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘ಟಾಕ್ಸಿಕ್’ ನಿರ್ಮಾಣ ಮಾಡುತ್ತಿದೆ. ಯಶ್ ಅವರ ‘ಮಾನ್ಸ್ಟರ್ ಮೈಂಡ್ ಕ್ರಿಯೇಷನ್’ ಕೂಡ ಇದಕ್ಕೆ ಕೈ ಜೋಡಿಸಿದೆ. ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ ಇದ್ದಾರೆ. ಮಾರ್ಚ್ 19ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್ನಲ್ಲೂ ರಿಲೀಸ್ ಆಗುತ್ತಿದೆ.


