ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಕೆಎನ್ ರಾಜಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಳಿಸಲಾಗಿದ್ದು, ರಾಜ್ಯ ಸರ್ಕಾರದ ಪತ್ರಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರ ಬಿಡುಗಡೆ ಆಗಿದ್ದು, ಇದರಿಂದ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಹೇಳಲಾಗಿದೆ.
ಮತಗಳ್ಳತನದ ಬಗ್ಗೆ ಕಾಂಗ್ರೆಸ್ ದೇಶಾದ್ಯಂತ ಹೋರಾಟ ಆರಂಭಿಸಿದ್ದರೆ, ಕಾಂಗ್ರೆಸ್ ವಿರುದ್ಧವೇ ಹೇಳಿಕೆ ನೀಡಿ ಬಿಜೆಪಿಗೆ ಆಹಾರ ನೀಡಿತ್ತು. ಮಹದೇವಪುರದಲ್ಲಿ ಸೋಲಿಗೆ ಕಾಂಗ್ರೆಸ್ ಪಕ್ಷದ ಲೋಪವೇ ಕಾರಣ ಎಂದು ಹೇಳಿದ್ದು ಹೈಕಮಾಂಡ್ ಅಸಮಾಧಾನಕ್ಕೆ ಕಾರಣವಾಗಿತ್ತು.