Thursday, January 01, 2026
Menu

ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಅತಿಕ್ರಮ ಸಂತ್ರಸ್ತರು!

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಪುನರ್ವಸತಿ ಮತ್ತು ಪರಿಹಾರ ಕೋರಿ ಸಂತ್ರಸ್ತರಾದ ಜೈಬಾ ತಬಸ್ಸುಮ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಬೇಡಿಕೆಗಳು ಏನು?

30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್​ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ. ಸರ್ಕಾರ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು ಅಲ್ಲಿಯವರೆಗೆ 3 ಹೊತ್ತಿನ ಪೌಷ್ಟಿಕಾಂಶಯುತ ಆಹಾರ ಒದಗಿಸಬೇಕು. 300 ಪ್ರತ್ಯೇಕ ಟೆಂಟ್, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಆರೋಗ್ಯ ತಪಾಸಣೆ ಮಾಡಬೇಕು. ಜೊತೆಗೆ ಕಟ್ಟಡ ತೆರವಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ.

ನಿರಾಶ್ರಿತರಿಗೆ ನಾಳೆಯೂ ಮನೆ ಹಂಚಿಕೆ ಡೌಟ್​

ಕೋಗಿಲು ಬಡಾವಣೆ ನಿರಾಶ್ರಿತರಿಗೆ ನಾಳೆಯೂ ಮನೆ ಹಂಚಿಕೆ ನಡೆಯುವುದು ಅನುಮಾನವಾಗಿದೆ. ಇನ್ನೂ ನಮಗೆ ಪಟ್ಟಿ ಬಂದಿಲ್ಲ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಪರಶುರಾಮ್ ಶಿನ್ನಾಳ್ಕರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ನಮಗೆ ಪಟ್ಟಿ ಬರಬೇಕಾಗಿದೆ. ಆ ಬಳಿಕವೇ ಪರಿಶೀಲಿಸಿ ನಾವು ಮನೆ ಹಂಚಿಕೆಪತ್ರ ನೀಡಬೇಕು ಎಂದಿದ್ದಾರೆ. ಹೀಗಾಗಿ ಮನೆ ಹಂಚಿಕೆ ಇನ್ನೂ 2-3 ದಿನಗಳು ತಡವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿಗೆ ಜಮೀರ್​​ ಕೌಂಟರ್​​

ಕೋಗಿಲು ನಿರಾಶ್ರಿತರಿಗೆ ಮನೆ ಹಂಚಿಕೆ ವಿಚಾರವಾಗಿ ಬಿಜೆಪಿ ಆರೋಪಗಳಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡುತ್ತೇವೆ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಬಾರದು. ಉರ್ದು ಮಾತನಾಡುವವರಿಗೂ ಮನೆ ಕೊಡಲ್ಲ. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ವೋಟರ್ ಐಡಿ ಇರಬೇಕು. ಎಲ್ಲಾ ದಾಖಲೆಗಳು ಇದ್ದರೆ ಮಾತ್ರ ಅವರಿಗೆ ಮನೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಡಿಸಿ ರಿಪೋರ್ಟ್ ಬಂದ ನಂತರ ಅರ್ಹರ ಬಗ್ಗೆ ನಿಖರ ಮಾಹಿತಿ ಸಿಗುತ್ತೆ. ಯಾರಿಗೂ ಅನ್ಯಾಯ ಆಗಬಾರದೆಂದು ಒಂದು ದಿನ ಹೆಚ್ಚು ಸಮಯತೆಗೆದುಕೊಂಡು ಪರಿಶೀಲಿಸುತ್ತಿದ್ದೇವೆ. ಕೋಗಿಲು ಬಡಾವಣೆಯಲ್ಲಿ ಒಟ್ಟು 257 ಮನೆಗಳು ಇದ್ದವು. ಅದರಲ್ಲಿ 157 ಮನೆಗಳನ್ನಷ್ಟೇ ಡೆಮಾಲಿಷನ್ ಮಾಡಲಾಗಿದೆ. ಇವರಲ್ಲಿ ಯಾರು ಅರ್ಹರು ಅನ್ನೋದನ್ನ ಪತ್ತೆ ಮಾಡಲಾಗ್ತಿದೆ ಎಂದಿದ್ದಾರೆ.

Related Posts

Leave a Reply

Your email address will not be published. Required fields are marked *