Saturday, February 14, 2026
Menu

ಬೆಂಗಳೂರಿನಲ್ಲಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ರನ್ ಸರದಾರ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಂಧ್ರಪ್ರದೇಶ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚು ಹರಿಸಿದ್ದಾರೆ. ಅಲ್ಲದೇ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ. ಕಳೆದ ವರ್ಷ ಆರ್ ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮತ್ತೊಂದು ಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 83 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ

ವೈಭವ್ ಸೂರ್ಯವಂಶಿ 190 ರನ್: 574 ರನ್ ಪೇರಿಸಿ ಬಿಹಾರ ವಿಶ್ವದಾಖಲೆ!

ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಗಮನ ಸೆಳೆಯುತ್ತಿರುವ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ ಸಿಡಿಸಿದ 190 ರನ್ ನೆರವಿನಿಂದ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಬಿಹಾರ 574 ರನ್ ಪೇರಿಸಿ ವಿಶ್ವದಾಖಲೆ ಬರೆದಿದೆ. ರಾಂಚಿಯಲ್ಲಿ ಬುಧವಾರ ನಡೆದ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ

ವಿರಾಟ್ ಕೊಹ್ಲಿ ಪಂದ್ಯಕ್ಕೆ ಅನುಮತಿ ನಿರಾಕರಣೆ: ಬೆಂಗಳೂರಿನ ಈ ಮೈದಾನಕ್ಕೆ ವಿಜಯ್ ಹಜಾರೆ ಶಿಫ್ಟ್

ಬೆಂಗಳೂರು: ವಿಜಯ ಹಜಾರೆ ಏಕದಿನ ಟೂರ್ನಿಯ ಭಾಗವಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಿಗದಿಯಾಗಿದ್ದ ದೆಹಲಿ ಹಾಗೂ ಆಂಧ್ರ ಪ್ರದೇಶ ನಡುವಿನ ಪಂದ್ಯಕ್ಕೆ ಅನುಮತಿ ನೀಡಲಾಗಿಲ್ಲ. ಇದರಿಂದ ಪಂದ್ಯವನ್ನು ಸ್ಥಳಾಂತರಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ

ವಿಜಯ್ ಹಜಾರೆ ಟೂರ್ನಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅವಕಾಶ ನಿರಾಕರಿಸಿದ ಪೊಲೀಸ್‌

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ವಿಜಯ್ ಹಜಾರೆ ಪಂದ್ಯಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪಂದ್ಯ ನಡೆಸುವ ಸಂಬಂಧ ಬೆಂಗಳೂರು ಆಯುಕ್ತ ಸೀಮಂತ್‌ ಕುಮಾರ್‌, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದದಾರೆ.

ಒಲಂಪಿಕ್ಸ್ ಚಿನ್ನ ಗೆಲ್ಲುವ ಕ್ರೀಟಾಪಟುಗಳಿಗೆ 6 ಕೋಟಿ ರೂ.ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ

ಟಿ-20 ವಿಶ್ವಕಪ್‌ ಗೆ ಭಾರತ ತಂಡ ಪ್ರಕಟ: ಶುಭಮನ್‌ ಗಿಲ್‌ ಗೆ ಕೊಕ್‌

ಮುಂಬರುವ ಟಿ-೨೦ ವಿಶ್ವಕಪ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್‌ ಅರ್ಗಕರ್‌ ಮತ್ತು

ದ.ಆಫ್ರಿಕಾ ಮಣಿಸಿ ಸತತ 10 ಟಿ-20 ಸರಣಿ ಗೆಲುವಿನ ದಾಖಲೆ ಬರೆದ ಭಾರತ

ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ ಸಿಡಿಲಬ್ಬರದ ಅರ್ಧಶತಕ ಹಾಗೂ ವರುಣ್‌ ಚಕ್ರವರ್ತಿ ಮಾರಕ ದಾಳಿ ಸಹಾಯದಿಂದ ಭಾರತ ತಂಡ 30 ರನ್‌ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 3-1ರಿಂದ 5 ಪಂದ್ಯಗಳ ಟಿ-20 ಸರಣಿಯನ್ನು ಗೆದ್ದು ತವರಿನಲ್ಲಿ ಸತತ 10

ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ: ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣಗೆ ಸ್ಥಾನ

ಬೆಂಗಳೂರು: ಡಿಸೆಂಬರ್ 24 ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಏಕದಿನ ಟ್ರೋಫಿಗೆ ಪ್ರಕಟಿಸಲಾದ ಕರ್ನಾಟಕ ತಂಡದಲ್ಲಿ ಸ್ಟಾರ್ ಆಟಗಾರರಾದ ಕೆ.ಎಲ್.ರಾಹುಲ್, ಪ್ರಸಿದ್ಧ ಕೃಷ್ಣ ಸೇರಿ ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಡಿಸೆಂಬರ್ 24 ರಿಂದ ಪ್ರಾರಂಭವಾಗಲಿರುವ ಟೂರ್ನಿ ಮುಂದಿನ ವರ್ಷ ಜನವರಿ

28.40 ಕೋಟಿಗೆ ಪ್ರಶಾಂತ್ ವೀರ್, ಕಾರ್ತಿಕ್ ಶರ್ಮ ಖರೀದಿ: ಇತಿಹಾಸ ಬರೆದ ಸಿಎಸ್ ಕೆ!

ಅನ್ ಕ್ಯಾಪ್ಡ್ (ಭಾರತ ತಂಡದಲ್ಲಿ ಸ್ಥಾನ ಪಡೆಯದ) ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮ ಅವರಿಗೆ ತಲಾ 14.20 ಕೋಟಿ ರೂ. ವಿನಿಯೋಗಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ ಬರೆದಿದೆ. ದುಬೈನಲ್ಲಿ ಮಂಗಳವಾರ ನಡೆದ ಐಪಿಎಲ್ ಮಿನಿ

ಅಂಡರ್ 19 ಏಷ್ಯಾಕಪ್: ಅಭಿಗ್ಯಾನ್ ದ್ವಿಶತಕ, ಭಾರತಕ್ಕೆ 315 ಗೆಲುವು

ಮಧ್ಯಮ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 315 ರನ್ ಗಳ ಭಾರೀ ಅಂತರದಿಂದ ಬಗ್ಗುಬಡಿದಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು