Saturday, February 14, 2026
Menu

7 ಕೋಟಿಗೆ ಆರ್ ಸಿಬಿ ಪಾಲಾದ ವೆಂಕಟೇಶ್ ಅಯ್ಯರ್

ಸ್ಫೋಟಕ ಬ್ಯಾಟ್ಸ್ ಮನ್ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಧನ ಹೊಂದಿದ್ದ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ. ನೀಡಿ ಆರ್ ಸಿಬಿ ಸೆಳೆಯುವಲ್ಲಿ ಯಶಸ್ವಿಯಾಯಿತು. ಕಳೆದ ಬಾರಿ 23.75 ಕೋಟಿ ರೂ.ಗೆ ಕೆಕೆಆರ್ ಪರ ಆಡಿದ್ದ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸುವಲ್ಲಿ ಆರ್ ಸಿಬಿ

ಐಪಿಎಲ್ ನ ಅತ್ಯಂತ ದುಬಾರಿ ವಿದೇಶೀ ಆಟಗಾರ ಕೆಮರೂನ್ ಗ್ರೀನ್: 25.20 ಕೋಟಿಗೆ ಕೆಕೆಆರ್ ಪಾಲು!

ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ಐಪಿಎಲ್ ಟಿ-20ಯ ಮಿನಿ ಹರಾಜಿನಲ್ಲಿ ಅತ್ಯಂತ ದುಬಾರಿ ವಿದೇಶೀ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ ಕೆಮರೂನ್ ಗ್ರೀನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ 25.20 ಕೋಟಿ ರೂ.ಗೆ ಖರೀದಿಸಿದೆ.

ರಣರಂಗವಾದ ಕೋಲ್ಕತಾ ಮೈದಾನ: ಮೆಸ್ಸಿ ಅಭಿಮಾನಿಗಳಿಂದ ದಾಂಧಲೆ!

ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ನೋಡುವ ಅವಕಾಶ ಸಿಗದೇ ರೊಚ್ಚಿಗೆದ್ದ ಅಭಿಮಾನಿಗಳು ಕೋಲ್ಕತಾದಲ್ಲಿ ದಾಂಧಲೆ ನಡೆಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು. ಮೆಸ್ಸಿ ಜೊತೆಗೆ ಅವರ ಇಂಟರ್ ಮಿಯಾಮಿ ತಂಡದ

ಕೋಲ್ಕತಾದಲ್ಲಿ ತನ್ನದೇ 70 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಲಿಯೊನೆಲ್ ಮೆಸ್ಸಿ!

14 ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡಿದ ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ 70 ಅಡಿ ಎತ್ತರದ ತನ್ನದೇ ಪ್ರತಿಮೆಯನ್ನು ವರ್ಚುಯಲ್​ ಆಗಿ ಅನಾವರಣಗೊಳಿಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸುವ ಮೂಲಕ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು.

ದೇಶೀಯ ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸಿಂಗ್: ನಾಲ್ವರು ಕ್ರಿಕೆಟಿಗರ ಅಮಾನತು

ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಟಿ20 ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ಪಂದ್ಯಾವಳಿಯಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ಅಮಾನತುಗೊಳಿಸಿದೆ. ಲಕ್ನೋದಲ್ಲಿ ನಡೆದ ಪಂದ್ಯಗಳ ಸಮಯದಲ್ಲಿ ನಾಲ್ವರು ಆಟಗಾರರು ಇತರ ತಂಡದ ಸದಸ್ಯರ

ಸೂರ್ಯವಂಶಿಯ 171 ರನ್ `ವೈಭವ’: ಭಾರತ ಯುವಪಡೆ 234 ರನ್ ಜಯಭೇರಿ

14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 234 ರನ್ ಗಳ ಬೃಹತ್ ಗೆಲುವು ದಾಖಲಿಸಿದೆ. ದುಬೈನಲ್ಲಿ ಶುಕ್ರವಾರ

ಚಿನ್ನಸ್ವಾಮಿ ಸ್ಟೇಡಿಯಂ‌ನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ: ವೆಂಕಟೇಶಪ್ರಸಾದ್

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ನೂತನ ಅಧ್ಯಕ್ಷ ವೆಂಕಟೇಶಪ್ರಸಾದ್ ಹೇಳಿದರು. ಬುಧವಾರ ಬೆಳಗಾವಿಯ ಕ್ರಿಕೆಟ್ ಸ್ಟೇಡಿಯಂ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ವಿಜಯೋತ್ಸವದ ವೇಳೆ

ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರಿಗೆ ಕೊಕ್!

ಮುಂಬೈ: ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು

ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯ ಸ್ಥಳಾಂತರಕ್ಕೆ ಬಿಡಲ್ಲ: ಡಿಕೆ ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಎಸ್ ಸಿಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಆರ್ ಸಿಬಿ