ಕ್ರೀಡೆ
ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತ್ಯಜಿಸಿದ ರಾಹುಲ್ ದ್ರಾವಿಡ್
ಭಾರತದ ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಐಪಿಎಲ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನ ತ್ಯಜಿಸಿ ಅಚ್ಚರಿ ಮೂಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ 2025ನೇ ಸಾಲಿನ ಐಪಿಎಲ್ ಟೂರ್ನಿ ವೇಳೆಗೆ ಮುಖ್ಯ ಕೋಚ್ ಆಗಿ ಮರಳಿದ್ದರು. ಆದರೆ ಇದೀಗ ತಂಡದಲ್ಲಿ ಮತ್ತಷ್ಟು ಜವಾಬ್ದಾರಿ ವಹಿಸಿಕೊಳ್ಳುವ ಪ್ರಸ್ತಾಪ ನಿರಾಕರಿಸಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ದ್ರಾವಿಡ್ ರಾಜೀನಾಮೆಯನ್ನು ದೃಢಪಡಿಸಿದೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ
ಮುಂಬೈ: ಭಾರತ ತಂಡದ ವಿಶ್ವಕಪ್ ಹೀರೋ ಆಲ್ ರೌಂಡರ್ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀವ್ ಶುಕ್ಲ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವದ ಸಮಸ್ಯೆ ಹಿನ್ನೆಲೆಯಲ್ಲಿ 70 ವರ್ಷದ ರೋಜರ್
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಪುರಸ್ಕಾರ ಮೊತ್ತ ಹೆಚ್ಚಳ: ಸಿಎಂ
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್
ದೋಹಾ ಡೈಮಂಡ್ ಲೀಗ್: 90.23 ಮೀ. ಜಾವೆಲಿನ್ ಎಸೆದು ನೀರಜ್ ಚೋಪ್ರಾ ದಾಖಲೆ!
ದೋಹಾ: ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ 90.23 ಮೀ. ಜಾವೆಲಿನ್ ಎಸೆದು ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರೀಡಾಪಟು ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ನೀರಜ್ ಚೋಪ್ರಾ ಶುಕ್ರವಾರ ನಡೆದ ದೋಹಾ
ಇಂದು ಆರ್ ಸಿಬಿ- ಕೆಕೆಆರ್ ಮುಖಾಮುಖಿ: ಪ್ಲೇಆಫ್ ಮೇಲೆ ಆರ್ ಸಿಬಿ ಕಣ್ಣು!
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಟೂರ್ನಿ ಇಂದಿನಿಂದ ಪುನರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ!
ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ
ರೋಹಿತ್ ಶರ್ಮ ಬೆನ್ನಲ್ಲೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ?
ನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ. ಕೆಲವು ದಿನಗಳ ಹಿಂದೆ ಬಿಸಿಸಿಐಗೆ ಮಾಹಿತಿ ರವಾನಿಸಿರುವ ವಿರಾಟ್ ಕೊಹ್ಲಿ
ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ
ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್
ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ
ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.




