ಕೃಷ್ಣಾಭಾಗ್ಯ ಜಲ ನಿಗಮ ಆಲಮಟ್ಟಿಗೆ ಸ್ಥಳಾಂತರ!

ಬೆಂಗಳೂರು: ಮೇ 13 (ಉದಯಕಾಲ ನ್ಯೂಸ್) ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರು ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ಆ ಭಾಗದ ಸರ್ವತೋಮುಖ ಅಭಿವೃದ್ಧಿಯನ್ನು ತೀವ್ರಗೊಳಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.

ತಕ್ಷಣ ಜಾರಿಗೆ ಬರುವಂತೆ ಸಂಪರ್ಕ ಕಚೇರಿಯನ್ನೂ ಒಳಗೊಂಡಂತೆ ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತದ ಬೆಂಗಳೂರಿನ ಎಲ್ಲ ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಒಂದು ವಾರದೊಳಗೆ ಆಲಮಟ್ಟಿಗೆ ಸ್ಥಳಾಂತರಿಸಿ ಸರಕಾರಕ್ಕೆ ವರದಿಯನ್ನು ಸಲ್ಲಿಸುವಂತೆ ಆದೇಶದಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *