ಹೈದರಾಬಾದ್‌ನ ರಾಮಂತಪುರದ ಗೋಕುಲನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ರಾಜೇಂದ್ರ ರೆಡ್ಡಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ತಡರಾತ್ರಿ ಈ ದುರಂತ ನಡೆದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಜನ್ಮಾಷ್ಟಮಿಯಂದು ದಹಿ ಹಂಡಿ ಆಚರಣೆಯ ಸಂದರ್ಭದಲ್ಲಿ ಜನರ ಗುಂಪಿನ ಮೇಲೆ ವಿದ್ಯುತ್ ಕಂಬ ಬಿದ್ದು 15 ವರ್ಷದ ಬಾಲಕ ಮೃತಪಟ್ಟು, ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.