ಉದಯಕಾಲ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಲಾರಿಗೆ ಕೆಎಸ್ಆರ್ಟಿಸಿ ಬಸ್ ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಹಾಗೂ ಓರ್ವ ಬಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಪ್ರಯಾಣಿಕ ಗಗನ್ (14) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಅಜಾಗರೂಕತೆಯಿಂದ ಅಪಘಾತ!
ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣ ಜಜ್ಜಿ ಹೋಗಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ಸ್ವರೂಪದ ಗಾಯಗೊಂಡಿರುವ ರಾಜು ನಾಯ್ಕ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ದೌಡು
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
#ChitradurgaAccident #KSRTCBus #LorryAccident #UdayakalaNews #KarnatakaRoadSafety #ChitradurgaNews #BreakingNews


