ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ.
ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರ, ಕರ್ನಾ ಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿ ರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ ಬಸ್ ಸಂಚಾರ ಸ್ಥಗಿತಗೊಂಡಿದೆ. ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗ ವಾಗಿ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಸಾರ್ಟಿಸಿ ಬಸ್ಗಳ ಸಂಚಾರ ಬಂದ್ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಚರಿಸುವ ಎಲ್ಲಾ ಬಸ್ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ಎಂಎಸ್‌ಆರ್‌ಟಿಸಿ ಬಸ್ ಮೇಲೆ ಶುಕ್ರವಾರ ರಾತ್ರಿ ಚಿತ್ರದುರ್ಗದಲ್ಲಿ ಕನ್ನಡಪರ ಕಾರ್ಯಕರ್ತರು ದಾಳಿ ಮಾಡಿದ್ದರು. ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೂ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದರು ಎಂದು ಆರೋಪಿಸ ಲಾಗಿದೆ. ಕರ್ನಾಟಕ ಸರ್ಕಾರ ಈ ವಿಷಯದ ಬಗ್ಗೆ ನಿಲುವನ್ನು ಸ್ಪಷ್ಟಪಡಿಸದ ಹೊರತು ಕರ್ನಾಟಕಕ್ಕೆ ಬಸ್ ಸೇವೆ ಗಳನ್ನು ಪುನರಾರಂಭಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬೆಳಗಾವಿ ಸಿಬಿಟಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್‌ನಲ್ಲಿ ಯುವಕ, ಯುವತಿಗೆ ಟಿಕೆಟ್ ಪಡೆ ಯಲು ನಿರ್ವಾಹಕ ಹೇಳಿದಾಗ, ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗುತ್ತಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್ ಹೇಳಿದ್ದಾರೆ. ಈ ಕಾರಣಕ್ಕೆ ಯುವಕ-ಯುವತಿ ನಿರ್ವಾಹಕ ಮಹಾದೇವ ಅವರ ಮೇಲೆ ಮುಗಿಬಿದ್ದಿದ್ದಾರೆ. ಬಸ್ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ನಾಲ್ವರು ಯುವಕರನ್ನು ಕರೆಯಿಸಿ ಕೊಂಡು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ.