Thursday, February 05, 2026
Menu

ಕೆವೈ ನಂಜೇಗೌಡರೇ ಮಾಲೂರು ಶಾಸಕ: ಸುಪ್ರೀಂಕೋರ್ಟ್

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರಿಗೆ ಹೆಚ್ಚು ಮತಗಳು ಬಂದಿವೆ. ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಗೆದ್ದಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದ ಮಂಜುನಾಥ್ ಗೌಡ ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ನ್ಯಾಯಾಲಯಕ್ಕೆ ಹೋಗಿದ್ದರು.

ನ್ಯಾಯಾಲಯದ ಸೂಚನೆಯಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನವೆಂಬರ್ 11ರಂದು ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆಸಿ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಮಾಜಿ ಶಾಸಕ ಮಂಜುನಾಥಗೌಡ ಮರು ಎಣಿಕೆಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದರು. ಕೆಲವೊಂದು ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್‌ಗಳನ್ನು ಎಣಿಸಬೇಕಿತ್ತು. ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಲಾಗಿದೆ. ಚುನಾವಣೆ ಮರುಎಣಿಕೆ ವಿರುದ್ದ ನನ್ನ ಕಾನೂನು ಹೋರಾಟ ಮುಂದುವರಿಯಲಿದೆ. ಸುಪ್ರೀಂಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿತ್ತು. ನನ್ನ ಕೆಲವೊಂದು ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ನಂಜೇಗೌಡ ಮಾತ್ರ ಮರು ಎಣಿಕೆಯಲ್ಲಿಯೂ ತಾವೇ ಗೆಲ್ಲುವುದಾಗಿ ಹೇಳಿದ್ದರು.

Related Posts

Leave a Reply

Your email address will not be published. Required fields are marked *