Thursday, January 30, 2025
Menu

ಚಿಕ್ಕಮಗಳೂರಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಘೋಷಿಸಿದೆ. ಹಗಲಲ್ಲಿ ರಣ ಬಿಸಿಲು, ಸಂಜೆಯಾಗುತ್ತಿದ್ದಂತೆ ಭಾರೀ ಚಳಿಯ ಹವಾಮಾನ ವೈಪರೀತ್ಯದಿಂದಲೂ ಜನರ ಆರೋಗ್ಯ ಹದಗೆಡುತ್ತಿರುವ ಮಧ್ಯೆ ಮಂಗನ ಕಾಯಿಲೆ ಜನರ ನಿದ್ದೆಗೆಡಿಸಿದೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.‌ ತೀವ್ರ ಜ್ವರದಿಂದ‌ ಬಳಲುತ್ತಿದ್ದ ಯುವಕನ ರಕ್ತ ಪರೀಕ್ಷೆಯಲ್ಲಿ‌ ಮಂಗನ ಕಾಯಿಲೆ ದೃಢಪಟ್ಟಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದರು.

ಚಿಕ್ಕಮಗಳೂರು, ಕೊಪ್ಪ, ಎನ್​ಆರ್​ಪುರ, ಶೃಂಗೇರಿ ತಾಲೂಕುಗಳಲ್ಲಿ ಅರೋಗ್ಯ ಇಲಾಖೆ ಮಂಗನ ಕಾಯಿಲೆ ಅಲರ್ಟ್ ಘೋಷಣೆ ಮಾಡಿ‌ ಕಾಯಿಲೆ‌ ಪತ್ತೆಯಾಗಿರುವ ಖಾಂಡ್ಯ ಹೋಬಳಿ ಮತ್ತಿಖಂಡ‌ ಗ್ರಾಮದಲ್ಲಿ ಉಣ್ಣೆಗಳನ್ನು ಸಂಗ್ರಹಿಸಿದೆ. ಮಂಗಗಳು ಮೃತಪಟ್ಟಿರುವ ಮಾಹಿತಿ ಸಂಗ್ರಹಿಸಿದೆ.

Related Posts

Leave a Reply

Your email address will not be published. Required fields are marked *