ಕಾನೂನು – ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆ: ಬೊಮ್ಮಾಯಿ

ಬೆಂಗಳೂರು,ಆ 10  ಕಾನೂನು ಸುವ್ಯವಸ್ಥೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಿ ಹೇಳಿದ್ದಾರೆ.
ಗೃಹ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಅಪರಾಧ ಕತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಬೇಕು ಪೊಲೀಸರಲ್ಲಿ ದಕ್ಷತೆ ಪ್ರಾಮಾಣಿಕ ಮತ್ತಷ್ಟು ಹೆಚ್ಚಾಗಬೇಕು, ಪೊಲೀಸರು ಇನ್ನಷ್ಟು ಜನಸ್ನೇಹಿ ಆಗಿರಬೇಕು, ಭೂ ಮಾಫಿಯಾ ಚಟುವಟಿಕೆಗಳಿಂದ ದೂರವಿರಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು.
ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು.
ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚಿಸಿದರು.ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು.
ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು.ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.. ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು ಎಂದು ಹೇಳಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು.
ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

, ,

Leave a Reply

Your email address will not be published. Required fields are marked *