ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.
ಬಜೆಟ್ ಅಧಿವೇಶನದ ವೇಳೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ರಣತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷದ ಶಾಸಕರನ್ನು ಸಿದ್ಧಗೊಳಿಸಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.
ವಿಶ್ವವಿದ್ಯಾಲಯಗಳ ರದ್ದು, ಶಾಸಕರ ಕ್ಷೇತ್ರಗಳಿಗೆ ಅನುದಾನ, ಕೇಂದ್ರ ಸರ್ಕಾರದ ತೆರಿಗೆಯಲ್ಲಿ ಕಡಿತ ಪ್ರಸ್ತಾಪ, ಗ್ಯಾರಂಟಿ ಯೋಜನೆಗಳಿಗೆ ಹಣ ಸೂಕ್ತ ಸಮಯದಲ್ಲಿ ಬಿಡುಗಡೆ ಆಗದೇ ಇರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್ ಶಾಸಕರಿಗೆ ತಿಳುವಳಿಕೆ ನೀಡಲು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ.