Menu

ತಿಪಟೂರಿನಲ್ಲಿ ವಿದ್ಯುತ್ ಆಘಾತಕ್ಕೆ ಲೈನ್​​ಮ್ಯಾನ್​​ ಬಲಿ

ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸುವಾಗ ಶಾಕ್​ ತಗುಲಿ ಲೈನ್​​ಮ್ಯಾನ್​​ ಮೃತಪಟ್ಟಿರುವ ಘಟನೆ ನಡೆದಿದೆ. ಕೆ.ಪಿ. ಮನು (26) ಮೃತ ವ್ಯಕ್ತಿ. ಇವರ ಪತ್ನಿ ಒಂಬತ್ತು ತಿಂಗಳ ಗರ್ಭಿಣಿ.

ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.  ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ​ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ, ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಿಗಾರಿಕೆ ಹೊಂಡದ ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಗದಗ ತಾಲೂಕಿನ ಲಕ್ಕುಂಡಿಯ ಕಣಗಿನಾಳ ರಸ್ತೆ ಸಮೀಪ ಅಕ್ರಮ ಮಣ್ಣು ಗಣಿಗಾರಿಕೆಯ ಹೊಂಡದ ನೀರಲ್ಲಿ ಮುಳುಗಿ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.

ಹೋಳಿ ಪ್ರಯುಕ್ತ ಬಣ್ಣದಾಟದ ಬಳಿಕ ಸ್ನೇಹಿತರು ಸ್ನಾನಕ್ಕೆ ತೆರಳಿದ್ದಾಗ ಈ ದುರಂತ ನಡೆದಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, 30-40 ಅಡಿ ಆಳ ಹೊಂಡಗಳನ್ನು ತೆಗೆಯಲಾಗಿದೆ.

ಶ್ಯಾಗೋಟಿ, ಚಿಕ್ಕಹಂದಿಗೋಳ, ಕಳಸಾಪೂರ, ಚಿಂಚಲಿ ಗ್ರಾಮಗಳಲ್ಲಿ ಇದೇ ರೀತಿಯ ಹೊಂಡದಲ್ಲಿ ಬಿದ್ದು ಮಕ್ಕಳು, ಯುವಕರು ಮೃತಪಟ್ಟಿದ್ದರು. ಕಳೆದ ವಾರ ಚಿಂಚಲಿ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿಗಳು ಅಸು ನೀಗಿದ್ದರು. ಆದರೂ ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆ ಯಾವುದೇ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದುಇ ಸಾರ್ವಜನಿಕರು ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *