ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಇನ್ಸ್ಟಾಗ್ರಾಂ ಅಕೌಂಟ್ ಮೂಲಕ ಆರೋಪಿ ಸಂರ್ಪಕದಲ್ಲಿದ್ದ. ಪಾಕಿಸ್ತಾನದ ಶಾಜದ್ ಬುಟ್ಟಿ ನೆಟವರ್ಕ್ ಗ್ಯಾಂಗ್‌ನ ಇನ್ಸ್ಟಾಗ್ರಾಂ ಅಕೌಂಟ್ ಇದಾಗಿದೆ. ಗಣ್ಯ ವ್ಯಕ್ತಿಗಳು ಹಾಗೂ ದೊಡ್ಡ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಪಾಕಿಸ್ತಾನಿ ಗ್ಯಾಂಗ್ ಇದು ಎಂದು ಹೇಳಲಾಗಿದೆ.
ಇನ್ಸ್ಟಾಗ್ರಾಂನ Hammadmemon333 ಪಾಕಿಸ್ತಾನ್ ಗ್ಯಾಂಗ್‌ನ ಅಕೌಂಟ್‌ನಲ್ಲಿ ಆರೋಪಿ ಸಂಪರ್ಕದಲ್ಲಿದ್ದ. ತನ್ನ ಆಧಾರ್ ಸೇರಿದಂತೆ ಹಲವಿ ಐಡಿಗಳನ್ನು ನೀಡಿ ಅಕೌಂಟ್‌ಗೆ ಲಾಗಿನ್ ಆಗಿದ್ದ. ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್‌ನ ಜೊತೆ ಇನ್ಸ್ಟಾಗ್ರಾಂನಲ್ಲಿ ಸಂಪರ್ಕದಲ್ಲಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ಎಸಿ ರಿಪೇರಿ ಕೆಲಸ ಮಾಡುವ ಜೊತೆಗೆ ಬೆಂಗಳೂರಿನ ಮಸೀದಿಯಲ್ಲಿ ಪಾಠ ಮಾಡುತ್ತಿದ್ದ. ಗ್ಯಾಂಗ್ ಹೇಳಿದಂತೆ ಕೇರಳ ಮತ್ತು ದೆಹಲಿಗೆ ಹೋಗಿ ಟ್ರೈನಿಂಗ್ ಪಡೆದುಕೊಂಡು ಬಂದಿದ್ದ. ಆರೋಪಿಯ ವಿರುದ್ಧ ಬಿಎನ್‌ಎಸ್ 113 (3) ( 197( 2 ) ಅಡಿ ಪ್ರಕರಣ ದಾಖಲಾಗಿದೆ.


