Menu

ಲಿವ್‌ ಇನ್‌ ರಿಲೇಷನ್‌ಶಿಪ್‌: ಮಗು ಅನುಮಾನಾಸ್ಪದ ಸಾವು

ಲಿವ್‌ ಇನ್‌ ರಿಲೇಷನ್‌ಶಿಪ್‌ ಜೋಡಿಯೊಂದಿಗೆ ಇದ್ದ ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ನಡೆದಿದೆ.

ಜೇಸನ್ ಆಂಥೋನಿ ಮತ್ತು ರೋಸ್ಲಿನ್‌ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ಅವರ ಎರಡು ವರ್ಷದ ಮಗು ಕಾರ್ಲೆಟ್ ಡೈಸಿ ಮೃತಪಟ್ಟಿದೆ. ಇದ್ದಕ್ಕಿದ್ದಂತೆ ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ.

ಮಗುವಿನ ತಾಯಿಯ ಸ್ನೇಹಿತೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮಗುವಿಗೆ ತಾಯಿ ಹೊಡೆಯುತ್ತಿದ್ದರು, ಅದನ್ನು ನಾನು ನೋಡಿದ್ದೆ. ಮಗುವಿನ ಮೈಮೇಲೆ ಕೆಲವೆಡೆ ಗಾಯದ ಗುರುತುಗಳು ಪತ್ತೆಯಾಗಿದೆ. ಹೀಗಾಗಿ ಮಗು ಸಾವಿನ ಬಗ್ಗೆ ಅನುಮಾನ ಇದೆ ಎಂದು ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ನಂತರ ಸಾವಿಗೆ ನಿಖರ ಕಾರಣ ಪತ್ತೆಯಾಗಲಿದೆ.

ಕಾರು ಚಲಿಸಿ ಮನೆ ಮುಂದೆ ಆಡುತ್ತಿದ್ದ ಮಗು ಸಾವು

ಮನೆ ಮುಂದೆ ಆಡುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಕಾರು ಚಲಿಸಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಹುಸೇಫಾ (2) ಮೃತಪಟ್ಟ ಮಗು.

ಅಜ್ಜ ಸಿಕಂದರ್ ಮನೆಗೆ ಬಂದಿದ್ದ ವೇಳೆ ಮನೆ ಮುಂದೆ ಆಟವಾಡುತ್ತಿದ್ದಾಗ ಕಾರು ಬಾಲಕನ ಮೇಲೆ ಚಲಿಸಿದೆ. ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿ ಪರಾರಿಯಾದ ಕಾರಿನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *