ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ.
ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸುವುದಾಗಿ ತಿಳಿಸಿದ್ದಾರೆ.
ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದ ಕಾರಣ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರಕಾರ ಮಾಹಿತಿ ನೀಡಿದೆ.
ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ, ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೆ ವೇಳಾಪಟ್ಟಿ ಪ್ರಕಟಿಸಲು ರೆಡಿ ಇರುವುದಾಗಿ ಹೇಳಿದರು.
ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜೂನ್ ಅಥವಾ ಜುಲೈನಲ್ಲಿ ಚುನಾವಣಾ ಆಯೋಗವು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬಹುದು ಎಂಬುದಾಗಿ ಎಜಿ ಹೈಕೋರ್ಟ್ ಗೆ ತಿಳಿಸಿದರು.