Saturday, December 06, 2025
Menu

ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್

havery lokayukta

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್​​ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಸಂಭವಿದೆ ಎಂದು ಶಂಕಿಸಲಾಗಿದೆ. ಡಿಕ್ಕಿ ರಭಸಕ್ಕೆ I20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗದಗದಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಇನ್ಸ್​​ಪೆಕ್ಟರ್​ ಸಾಲಿಮಠ​ ಹುಬ್ಬಳ್ಳಿ ಮಾರ್ಗವಾಗಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಿಗೆ ಹೋಗುವ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. 2003ರ ಬ್ಯಾಚಿನ ಪಂಚಾಕ್ಷರಯ್ಯ​ ಸಾಲಿಮಠ ಅವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಬೆಳಗಾವಿ ಜಿಲ್ಲೆಯ‌ ಬೈಲಹೊಂಗಲದಿಂದ ಹಾವೇರಿ ಲೋಕಾಯುಕ್ತ ಕಚೇರಿಗೆ ಪಿಎಸ್​ಐ ಆಗಿ ವರ್ಗಾವಣೆಯಾಗಿದ್ದರು. ಶುಕ್ರವಾರ ಮಧ್ಯಾಹ್ನ ಕರ್ತವ್ಯ‌ ಮುಗಿಸಿ ಗದಗಿಗೆ‌ ಹೊರಟಿದ್ದರು. ಈ ಸಂದರ್ಭದಲ್ಲಿ ಈ ದುರಂತ ನಡೆದಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಅವರು, ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡ ಲೋಕಾಯುಕ್ತ ಇನ್ಸ್​ಪೆಕ್ಟರ್​ ಪಂಚಾಕ್ಷರಯ್ಯ ಸಾಲಿಮಠ ಅವರು ಸಂಜೆ ಸುಮಾರು 5ಕ್ಕೆ ಹಾವೇರಿಯಿಂದ ಗದಗ ಕಡೆಗೆ ಹೊರಟಿದ್ದರು. ಈ ವೇಳೆ ಭದ್ರಾಪುರ ಹಾಗೂ ಅಣ್ಣಿಗೇರಿ ಬಳಿ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಸಭಸದಿಂದ ಕಾರು 15 ಮೀಟರ್ ಕೆಳಗೆ ಹೋಗಿದೆ. ಬಳಿಕ ಪೆಟ್ರೋಲ್ ಟ್ಯಾಂಕ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಚಾಕ್ಷರಯ್ಯ ಅವರು ಅಲ್ಲಿಯೇ ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ರಿನಲ್ಲಿ ಅವರೊಬ್ಬರೇ ಇದ್ದು, ಅವರೇ ಕಾರು ಚಲಾವಣೆ ಮಾಡುತ್ತಿದ್ದರು ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಮುರುಗೋಡದ ಸಾಲಿಮಠ, ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

Related Posts

Leave a Reply

Your email address will not be published. Required fields are marked *