Menu

ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್‌ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಕಲಬುರಗಿಯಲ್ಲಿ ಪಂಚಾಯತ್​​ರಾಜ್​​ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್​.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ ನಗರದ ಮನೆ ಸೇರಿ ಐದು ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ನಿವಾಸ, ತೋಟದ ಮನೆ, ಹುಮ್ನಾಬಾದ್​ನ ಎರಡು ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ. ದಾವಣಗೆರೆಯ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂವರು ಅಧಿಕಾರಿಗಳ ಮನೆ, ಕಚೇರಿಗಳು ಸೇರಿ 12 ಕಡೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಹುಬ್ಬಳ್ಳಿಯ ಕೆಎಸ್ಸಾರ್ಟಿಸಿ ಚೀಫ್​ ಮೆಕ್ಯಾನಿಕ್ ಸಿದ್ದೇಶ್ವರ ಅವರ ಆಂಜನೇಯ ಬಡಾವಣೆಯ ಮನೆ, ಹುಬ್ಬಳ್ಳಿ ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆದಿದೆ. ಸಿದ್ದೇಶ್ವರ ಮನೆಯಲ್ಲಿ 40 ಲಕ್ಷ ರೂ. ಪತ್ತೆಯಾಗಿದೆ. ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್​​ ಅವರ ಸಿದ್ದವೀರಪ್ಪ ಬಡಾವಣೆಯ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ನಡೆದಿದೆ.

ಬೆಳಗಾವಿ ಕೆಆರ್‌ಐಡಿಎಲ್‌ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪಗೆ ಸೇರಿದ ಮನೆ ಸೇರಿದಂತೆ ಐದು ಕಡೆಯೂ ದಾಳಿ ಮಾಡಲಾಗಿದೆ. ಚಿಕ್ಕಮಗಳೂರು ಎಸಿಎಫ್‌ ಮೋಹನ್​ಗೆ ಸೇರಿದ ಮನೆ, ಕಚೇರಿ, ನಿರ್ಮಾಣ ಹಂತದ ಮನೆ ಒಳಗೊಂಡು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕಲ್ಯಾಣನಗರದ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಮೋಹನ್ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Related Posts

Leave a Reply

Your email address will not be published. Required fields are marked *