Menu

ಮುಡಾ ಪ್ರಕರಣದ ವರದಿ ಸಲ್ಲಿಸಿದ ಲೋಕಾಯುಕ್ತ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದದ ಕುರಿತು ಲೋಕಾಯುಕ್ತ ವರದಿ ಸಲ್ಲಿಸಿದ್ದು, ಧಾರವಾಡ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ವರದಿ ಸಲ್ಲಿಕೆಗೆ ಜನವರಿ 28ರಂದು ಗಡುವು ನೀಡಲಾಗಿದ್ದು, ಒಂದು ದಿನ ಮುಂಚಿತವಾಗಿ ಅಂದರೆ ಸೋಮವಾರ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿಯನ್ನು ಸಲ್ಲಿಸಿತು.

ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ್ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂಬರ್ ಒನ್ ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ.

ಮುಡಾ ಹಗರಣದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ಕೈಗೆತ್ತಿಕೊಂಡಿತು. ದೂರುದಾರರ ವಿರುದ್ಧ ವಾದ ಮಂಡಿಸಲು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಕಾಲಾವಕಾಶ ನೀಡುವಂತೆ ಪೀಠದ ಮುಂದೆ ಮನವಿ ಮಾಡಿದರು.

ರಜೆಯ ನಂತರ ಬೆಂಗಳೂರಿನಲ್ಲಿ ನ್ಯಾಯಾಲಯವು ಮತ್ತೆ ಕಾರ್ಯನಿರ್ವಹಿಸಿದಾಗ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಬಹುದು ಎಂದರು.ಆದರೆ ಇದಕ್ಕೆ ಒಪ್ಪದ ನ್ಯಾಯಪೀಠ, ವಿಳಂಬ ಮಾಡದೆ ವಾದ ಮಂಡಿಸುವಂತೆ ಎಜಿಗೆ ಸೂಚಿಸಿತು.

Related Posts

Leave a Reply

Your email address will not be published. Required fields are marked *