ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.
ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಮಾತ್ರ ಬದಲಾವಣೆ ಮಾಡಲಾಗಿದ್ದು, ಸಾಧಾರಣ ಪ್ರದರ್ಶನ ನೀಡಿದ ಪ್ರಸಿದ್ಧ ಕೃಷ್ಣ ಬದಲು ಜಸ್ ಪ್ರೀತ್ ಬುಮ್ರಾ ಬಂದಿದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದು, ಈ ಪಂದ್ಯ ಗೆದ್ದು ಮುನ್ನಡೆ ಸಾಧಿಸಲು ಉಭಯ ತಂಡಗಳಿಗೆ ಮಹತ್ವದ್ದಾಗಿದೆ.