Menu

ರಾಯಬಾಗದಲ್ಲಿ ಲಾರಿ ಪಲ್ಟಿ: ವಿದ್ಯಾರ್ಥಿ ಬಲಿ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಉರುಳಿದ ಪರಿಣಾಮವಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಸಿಮೆಂಟ್ ಲಾರಿ ತಿರುವಿನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಐದನೇ ತರಗತಿ ವಿದ್ಯಾರ್ಥಿ ಅಮಿತ್​ ಕಾಂಬಳೆ(11) ಸ್ಥಳದಲ್ಲೇ ಅಸು ನೀಗಿದ್ದಾನೆ. ಅಂಜಲಿ‌ ಕಾಂಬಳೆ(15), ಅವಿನಾಶ ಕಾಂಬಳೆ(14) ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಲಾರಿ ಮೇಲೆತ್ತಿ ಕೆಳಗೆ ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ

ಬಸ್ ಧರೆಗೆ ಗುದ್ದಿ ಮಗು ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​​ನಲ್ಲಿ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಧರೆಗೆ ಗುದ್ದಿದ ಪರಿಣಾಮ ಮಗು ಪ್ರಾಣ ಬಹೋಗಿದೆ. ಒಂದೂವರೆ ವರ್ಷದ ಮಗು ಮೃತಪಟ್ಟಿದ್ದು, 10 ಜನರಿಗೆ ಗಂಭೀರ ಗಾಯಗಳಾಗಿವೆ. ಬಸ್​ ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಒವರ್​​ಟೇಕ್​​ ಮಾಡುವಾಗ ನಿಯಂತ್ರಣ ತಪ್ಪಿ ಬಸ್​​ ಬೈಕ್​​ಗೆ ಗುದ್ದಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *