ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್ಗಳು ಸ್ವಿಚ್ಡ್ ಆಫ್ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ
ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು.
ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ರಮೇಶ್ ಕುಮಾರ್ ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ಮಾಡಿಕೊಂಡು ದಾವಣಗೆರೆಯಲ್ಲಿ ನೆಲೆಸಿದ್ದರು. ರಮೇಶ್ ಕುಮಾರ್ ಸಾರ್ವಜನಿಕರಿಂದಲೂ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರು, ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟವಾಗಿತ್ತು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಕುಟುಂಬ ಸಮೇತ ಮನೆ ಬಿಟ್ಟು ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಆಗಸ್ಟ್ 14ರಂದು ರಮೇಶ್ ಕುಮಾರ್ಪೋಷಕರಿಗೆ ಕರೆ ಮಾಡಿ, ವೈಯಕ್ತಿಕ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿದ್ದರು. ಸ್ವಂತ ಕಾರು, ಬೈಕ್ ಮನೆಯ ಬಳಿಯೇ ನಿಲ್ಲಿ, ಆಟೋದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ತೆರಳಿದ ಬಳಿಕ ನಾಲ್ವರೂ ಮನೆಗೆ ವಾಪಸ್ ಬಂದಿಲ್ಲ. ಎಲ್ಲರ ಮೊಬೈಲ್ಗಳು ಸ್ವಿಚ್ಆಫ್ ಆಗಿವೆ.
ರಮೇಶ್ ಅವರ ಪೋಷಕರು ಹಾಗೂ ಸಂಬಂಧಿಕರು ಬೆಂಗಳೂರು ಸೇರಿದಂತೆ ಪರಿಚಯವಿರುವ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಯಾವುದೇ ಮಾಹಿತಿ ಸಿಕ್ಕಿಲ್ಲ. ಕೊನೆಗೆ ಕುಟುಂಬಸ್ಥರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ರಮೇಶ್ ಅವರ ಕೊನೆಯ ಮೊಬೈಲ್ ನೆಟ್ವರ್ಕ್ ಲೊಕೇಶನ್ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
ಮಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಖಾಸಗಿ ಬಸ್ ನಾಗಮಂಗಲದ ಲಾಂಕೋ ಟೋಲ್ ಗೇಟ್ ಬಳಿ ಹೆದ್ದಾರಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಬಸ್ಸಲ್ಲಿದ್ದ ಒಬ್ಬ ಪ್ರಯಾಣಿಕ ಮತ್ತು ಬಸ್ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ವೇಗವಾಗಿ ಬರುತ್ತಿದ್ದ ಬಸ್ ಡಿಕ್ಕಿಯ ರಭಸಕ್ಕೆ ಬಸ್ದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ ಬಾಗ್ (64), ಬಸ್ ಕ್ಲೀನರ್ ಅಶೋಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಸ್ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


