ಮದುವೆಗೆ ಮನೆಯಲ್ಲಿ ಒಪ್ಪಿಗೆ ದೊರೆಯದ ಕಾರಣಕ್ಕೆ ಪ್ರೇಮಿಗಳು ಆಟೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮನವಳ್ಳಿ ಪಟ್ಟಣ ನಿವಾಸಿಗಳಾದ ರಾಘವೇಂದ್ರ (28) ಮತ್ತು ರಂಜಿತಾ ಚೋಬರಿ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರವಲಯದಲ್ಲಿ ಪ್ರೇಮಿಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
15 ದಿನಗಳ ಹಿಂದೆಯಷ್ಟೇ ರಂಜಿತಾಗೆ ಮನೆಯಲ್ಲಿ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯ ಮಾಡಿದ್ದರು. ಇದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.