ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ಛತ್ತೀಸ್‌ಗಢ, ಕೊಂಕಣ, ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರ, ಸೌರಾಷ್ಟ್ರ, ಕಚ್, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ, ಕರ್ನಾಟಕ, ದಕ್ಷಿಣ ಕೊಂಕಣ, ಗೋವಾ ಕರಾವಳಿ ಭಾಗ ಮತ್ತು ಪಕ್ಕದ ಸಮುದ್ರ ಪ್ರದೇಶಗಳು, ಲಕ್ಷದ್ವೀಪ, ಕೊಮೊರಿನ್ ಪ್ರದೇಶಗಳು, ಮಾಲ್ಡೀವ್ಸ್, ಆಗ್ನೇಯ ಮತ್ತು ನೈಋತ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಪೂರ್ವ ಮಧ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರದ ಹಲವು ಭಾಗಗಳು, ಮನ್ನಾರ್ ಕೊಲ್ಲಿ ಹಾಗೂ ತಮಿಳುನಾಡಿನಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶ, ಶ್ರೀಲಂಕಾ ಕರಾವಳಿಗಳು, ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ, ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ನೈಋತ್ಯ ಬಂಗಾಳ ಕೊಲ್ಲಿಯ ಮತ್ತು ಅಂಡಮಾನ್ ಸಮುದ್ರದ ಅನೇಕ ಭಾಗಗಳಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ.
ಇದಲ್ಲದೇ, ನೈಋತ್ಯ ಮತ್ತು ಪಕ್ಕದ ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಈಶಾನ್ಯ ಬಂಗಾಳ ಕೊಲ್ಲಿಯ ಭಾಗಗಳಲ್ಲಿಯೂ ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಮತ್ತು ಗಂಟೆಗೆ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


