Menu

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ.

18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರನಾಗಿದ್ದು,  ಕಳೆದ ಜೂನ್ 6ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಆತನಿಗೆ ಕಡಿಮೆ ಅಂಕ ಬಂದಿತ್ತು. ಈ ಕಾರಣಕ್ಕೆ ಬೇಸತ್ತು ಮನೆಯಲ್ಲಿ  ಕೀಟನಾಶಕ ಸೇವಿಸಿದ್ದ ಎನ್ನಲಾಗಿದೆ.

ಆತನನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು, ಬಳಿಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,  ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾನೆ. ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೋಂ ಸ್ಟೇನಲ್ಲಿ ಯುವತಿಯ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇನಲ್ಲಿ ಬೆಂಗಳೂರಿನ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಮೃತ ಯುವತಿಯನ್ನು ಸಾಯಿ ಸುರಭಿ ಎಂದು ಗುರುತಿಸಲಾಗಿದ್ದು, ಪ್ರಿಯಕರ ಕೇರಳದ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ತಾಯಿ ಗೀತಾ, ಇದೊಂದು ಲವ್ ಜಿಹಾದ್ ಕೊಲೆ ಎಂದು ಆರೋಪ ಮಾಡಿದ್ದಾರೆ.

ಸಾಯಿ ಸುರಭಿ ಹಾಗೂ ಕ್ಯಾಬ್ ಡ್ರೈವರ್ ಸಂಜೀತ್ ಅಲಿ ಕಳೆದ ಶನಿವಾರ ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇಗೆ ಬಂದು ತಂಗಿದ್ದರು. ಸೋಮವಾರ ಚೆಕ್-ಔಟ್ ಸಮಯ ಮುಗಿದರೂ ರೂಮ್ ತೆರೆಯದಿದ್ದಾಗ ಹೋಂ ಸ್ಟೇ ಕೇರ್‌ಟೇಕರ್ ಬಂದು ಪರಿಶೀಲಿಸಿದಾಗ ಈ ದುರಂತ ನಡೆದಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *