ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗದ ಕಾರಣ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಲು ಮುಂದಾಗಿದೆ. ಎಚ್ಸಿಎಲ್ಟೆಕ್ ಕಂಪನಿಯು ಎರಡು ದಿನದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಕೊಟ್ಟಿದೆ.
ಇರಾನ್- ಇಸ್ರೇಲ್ ಯುದ್ಧದ ಭಾಗವಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳು ಹೊತ್ತಿ ಉರಿಯುತ್ತಿರುವುದರಿಂದ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಲಭ್ಯತೆ ದುಸ್ತರವಾಗಿ ಪರಿಣಮಿಸಿದೆ. ಹೋಟೆಲ್ಗಳು ಈ ಸಮಸ್ಯೆ ಬಗೆಹರಿಯುವವರೆಗೂ ಬಾಗಿಲು ಬಂದ್ ಮಾಡಲು ನಿರ್ಧರಿಸಿವೆ.
ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗದ ಕಾರಣ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಲು ಮುಂದಾಗಿದೆ. ಎಚ್ಸಿಎಲ್ಟೆಕ್ ಕಂಪನಿಯು ಎರಡು ದಿನದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಕೊಟ್ಟಿದೆ.
ಎಚ್ಸಿಎಲ್ಟೆಕ್ನಂತಹ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ನೀಡಿದ್ದರೆ, ಇನ್ಫೋಸಿಸ್ ಸೇರಿದಂತೆ ಕೆಲವು ಕಾರ್ಪೊರೇಟ್ ಸಂಸ್ಥೆಗಳು ಉದ್ಯೋಗಿಗಳಿಗೆ ಮನೆಯಿಂದಲೇ ಅಡುಗೆ ಮಾಡಿಕೊಂಡು ಪಾರ್ಸಲ್ ತರುವಂತೆ ಹೇಳಿದೆ.
ಅಡುಗೆ ಅನಿಲದ ಪೂರೈಕೆಯಲ್ಲಿ ಯಾವ ಸಮಸ್ಯೆಯೂ ಇಲ್ಲ ಎಂದು ಸರ್ಕಾರ ಹೇಳಿದರೂ ದೇಶದ ಹೆಚ್ಚಿನ ಕಡೆ ಎಲ್ಪಿಜಿ ಸಿಲಿಂಡರ್ ಸರಬರಾಜು ಆಗುತ್ತಿಲ್ಲ, ಗೃಹಬಳಕೆ ಎಲ್ಪಿಜಿ ಸಿಗುವುದೂ ಕಷ್ಟವಾಗಿದೆ.
ಎಲ್ಪಿಜಿ ಪೂರೈಕೆಯ ಕಾರಣ ನಗರಗಳಲ್ಲಿ ಹೋಟೆಲ್ಗಳು, ಇಂದಿರಾ ಕ್ಯಾಂಟೀನ್ಗಳು, ಪಿಜಿಗಳು, ಹಾಸ್ಟೆಲ್ಗಳು ಬಂದ್ ಮಾಡಬೇಕಾದ ಸ್ಥಿತಿ ಬಂದಿದೆ. ರಾಜ್ಯದ ದೇವಸ್ಥಾನಗಳಲ್ಲೂ ಅನ್ನ ದಾನ, ಪ್ರಸಾದ ತಯಾರಿಗೆ ತೊಂದರೆಯುಂಟಾಗಿದೆ.