ಮಹಾರಾಷ್ಟ್ರದ ಡ್ರಗ್ಸ್ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.
ಆರ್ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ವಶಕ್ಕೆ ಪಡೆದು ಪೊಲೀಸರು ಅಬ್ದುಲ್ಲಾ ಖಾದರ್ ಶೇಕ್ ಎಂಬಾತನ ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಹಲವು ವಿಷಯ ಬಾಯ್ಬಿಟ್ಟಿದ್ದ. ಬಳಿಕ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಪಾಟೀಲ್ ಮಾಹಿತಿಯಂತೆ ಬೆಂಗಳೂರಿನ ಮೂರು ಕಡೆ ದಾಳಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ 4.1 ಕೆಜಿ ಘನ MDMA ಮತ್ತು 17 ಕೆಜಿ ದ್ರವ MDMA ಸೇರಿ 55.88 ಕೋಟಿ ರೂ. ಮೌಲ್ಯದ ಒಟ್ಟು 21.4 ಕೆಜಿ ಡ್ರಗ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಬಂಧಿತರು. ಈ ಫ್ಯಾಕ್ಟರಿಗಳಿಂದ ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸರಬರಾಜು ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಾಗಲೂರು ಪೊಲೀಸ್ ಠಾಣೆ ಮಿತಿಯೊಳಗಿನ ಸ್ಪಂದನ ಲೇಔಟ್ ಕಾಲೋನಿ, ಕೊತ್ತನೂರು ಠಾಣೆ ಮಿತಿಯ ಎನ್.ಜಿ. ಗೋಲ್ಲಹಳ್ಳಿ ಪ್ರದೇಶದಲ್ಲಿ ಆರ್ಜೆ ಈವೆಂಟ್ ಎಂಬ ಹೆಸರಿನ ಕಾರ್ಖಾನೆ
ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಯರಪ್ಪನಹಳ್ಳಿ ಮನೆಗಳಲ್ಲಿ ಡ್ರಗ್ಸ್ ಫ್ಯಾಕ್ಟರಿಗಳ ಕಾರ್ಯಾಚರಣೆ ಪತ್ತೆಯಾಗಿದೆ.
ರಾಜಸ್ಥಾನದ ಯೋಗಿರಾಜ್ ಕುಮಾರ್ ಮತ್ತು ನಯನ್ ಪವರ್ ಪ್ರಮುಖ ರೂವಾರಿಗಳಾಗಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ದೇಶದ ಹಲವೆಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.


