ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ತಿಮರೂಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೂಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಬೆಳ್ತಂಗಡಿ ಪೊಲೀಸರು ಮೂರು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಮಹೇಶ್ ತಿಮರೂಡಿ ಕಳೆದ 20 ದಿನಗಳಿಂದ ನಾಪತ್ತೆಯಾಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಅಜ್ಞಾತವಾಸದಲ್ಲಿರುವ ತಿಮರೂಡಿ ಬಂಧನ ಭೀತಿ ಎದುರಿಸುತ್ತಿದ್ದು, ಇದೀಗ ಬೆಳ್ತಂಗಡಿ ಪೊಲೀಸರು ಬಂಧಿಸಲು ಕ್ರಮ ಕೈಗೊಳ್ಳಲಿದ್ದಾರೆ.