ಮಹಿಳೆ
ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ
ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಜಿಪಂ ಸಿಇಒ ನಂದಿನಿ, ಯಂತ್ರಗಳ ಮೂಲಕ ಭತ್ತ ನಾಟಿ ಮಾಡಲು ಮಹಿಳೆಯರಿಗೆ ಸಾಧ್ಯವಿಲ್ಲ ಎಂಬ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಮತ್ತು ಯಂತ್ರವನ್ನು
ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ
ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ
ಸುಜಾತ ಭಟ್ಗೆ ಎಸ್ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ
ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು
100 ರೂಪಾಯಿಗೆ ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚುವ ಕಿಟ್
ಮಹಿಳೆಯರಲ್ಲಿ ಅತ್ಯಂತ ಮಾರಕ ಕಾಯಿಲೆಯಾಗಿ ಗರ್ಭಕಂಠದ ಕ್ಯಾನ್ಸರ್ ವ್ಯಾಪಿಸುತ್ತಿದ್ದು, ಇದಕ್ಕೆ ಸಂಬಂಧಿಸಿದ ಪರೀಕ್ಷೆಗಳು ದುಬಾರಿಯಾಗಿದ್ದು, ಹೆಚ್ಚಿನ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆದರೆ ಈಗ ಏಮ್ಸ್ ವೈದ್ಯರು ಕೇವಲ 100 ರೂ.ಗೆ ಲಭ್ಯವಾಗುವ ಎರಡು ಗಂಟೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ಪತ್ತೆಹಚ್ಚುವ ಡಯಾಗ್ನಿಸ್ಟಿಕ್
ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ
625ಕ್ಕೆ 625 ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ
ಶಿರಸಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ವಿಶೇಷ ಸಾಧನೆ ಮಾಡಿದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಿವಮೊಗ್ಗ
ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲೂ ಶೇ.50 ಸೀಟು ಹೆಣ್ಣು ಮಕ್ಕಳಿಗೆ ಕಡ್ಡಾಯ
2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ ಸೇರಿದಂತೆ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಖಾಸಗಿ ಶಾಲೆ ಗಳಲ್ಲೂ ಶೇ.50ರಷ್ಟು ಸೀಟುಗಳನ್ನು
ಬೆಟಗೇರಿಯಲ್ಲಿ ನವ ವಿವಾಹಿತೆಯ ಆತ್ಮಹತ್ಯೆ
ಗದಗ ಜಿಲ್ಲೆಯ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ಡೆತ್ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೂಜಾ ಅಮರೇಶ ಅಯ್ಯನಗೌಡರ್(27) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ
ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ಮದುವೆ ಫೋಟೊ ವೈರಲ್!
ಮಹಿಳಾ ಬಾಡಿ ಬಿಲ್ಡರ್ ಖ್ಯತ ಚಿತ್ರಾಪುರುಷೋತ್ತಮ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬೆನ್ನಲ್ಲೇ ಅವರ ಸಾಂಪ್ರದಾಯಿಕ ಸೀರೆಯಲ್ಲೂ ಬಾಡಿಬಿಲ್ಡ್ ಫೋಟೊ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹಚ್ಚಿದೆ. ಕನ್ನಡದ ಖ್ಯಾತ ಮಹಿಳಾ ಬಾಡಿಬಿಲ್ಡರ್ ಚಿತ್ರಾ ಪುರುಷೋತ್ತಮ್ ವಿಶಿಷ್ಟ ವಧುವಿನ ಲುಕ್ನಿಂದಾಗಿ ಗಮನ ಸೆಳೆದಿದ್ದಾರೆ.
ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ
ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ