Menu

ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್‌ ಸೆಕ್ರಟರಿ ಜನರಲ್‌ ಪ್ರಶಸ್ತಿ

ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ  ಒಲಿದು ಬಂದಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರನ್ನು 2025 ರ ಪ್ರತಿಷ್ಠಿತ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ವಿಜೇತರು ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಸಮಾನ ಪಾಲುದಾರರು, ಶಾಶ್ವತ ಶಾಂತಿ ಎಂಬ ಯೋಜನೆಗಾಗಿ 2025 ರ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿಯನ್ನು ಸ್ವಾತಿ ತಮ್ಮದಾಗಿಸಿಕೊಂಡಿದ್ದಾರೆ. ವಿಶ್ವಾದ್ಯಂತ ಎಲ್ಲಾ ಯುಎನ್ ಶಾಂತಿಪಾಲನಾ ಮಿಷನ್‌ಗಳು ಮತ್ತು ಏಜೆನ್ಸಿಗಳಿಂದ ಬಂದ ನಾಮನಿರ್ದೇಶನಗಳಲ್ಲಿ ನಾಲ್ಕು ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಭಾರತೀಯ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ವಿಜೇತವಾಗಿದೆ.

ಮೇಜರ್ ಸ್ವಾತಿ ಅವರ ನೇತೃತ್ವದಲ್ಲಿ ಭಾರತೀಯ ತಂಡವು ಗ್ರಾಮೀಣ ಮಟ್ಟದಲ್ಲಿ ಶಾಂತಿ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದ್ದು, ಸಂಘರ್ಷ ಪೀಡಿತ ದೇಶದಲ್ಲಿ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತೆ ಒದಗಿಸಿದೆ. ಇದರಿಂದ ಸಮುದಾಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿ ನಂಬಿಕೆ ಮತ್ತು ಸಂವಹನ ಬಲಗೊಂಡಿದೆ.

ದಕ್ಷಿಣ ಸುಡಾನ್‌ನಲ್ಲಿ ಸ್ವಾತಿ ಶಾಂತಕುಮಾರ್ ನಡೆಸುತ್ತಿರುವ “EqualPartnersLastingPeace” ಎಂಬ ಯೋಜನೆಯು ಲಿಂಗ-ಪ್ರತಿಕ್ರಿಯಾಶೀಲ ಶಾಂತಿಪಾಲನೆಗಾಗಿ ಹೊಸ ಜಾಗತಿಕ ಮಾನದಂಡವನ್ನು ನಿಗದಿಪಡಿಸಿದೆ.

Related Posts

Leave a Reply

Your email address will not be published. Required fields are marked *