ಮಂಡ್ಯದ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಮೈಸೂರು ಮೂಲದ ರಮೇಶ್(31) ಕೊಲೆಯಾದ ವ್ಯಕ್ತಿ.
ಕಳೆದೆರಡು ತಿಂಗಳಿಂದ ಈ ಭಾಗದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ರಾತ್ರಿ ಶಾಲೆಯ ಆವರಣದಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ಹಾಗು ಶ್ವಾನದಳವರು ಆಗಮಿಸಿ ತನಿಖೆಗೆ ಸಹಕರಿಸಿದ್ದಾರೆ. ಹಲಗೂರು ಪೊಲೀಸರು ಪ್ರಕರಣ ದಅಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.