Menu

ಬಳ್ಳಾರಿಯಲ್ಲಿ ಪತ್ನಿ, ಏಳು ತಿಂಗಳ ಮಗು ಕೊಂದು ವ್ಯಕ್ತಿ ಪರಾರಿ

ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಮತ್ತು ಏಳು ತಿಂಗಳ ಮಗುವನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಹೊನ್ನೂರಸ್ವಾಮಿ ಎಂಬಾತ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ.

ಕೆಲವು ದಿನಗಳಿಂದ ಕುಟುಂಬದಲ್ಲಿ ಜಗಳ ನಡೆಯುತ್ತಿದ್ದು, ಗುರುವಾರ ತಡರಾತ್ರಿ ಜಗಳ ತೀವ್ರಗೊಂಡು ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರೀತಿಸಿದ ಹುಡಗಿ ಕೈ ಕೊಟ್ಟಳೆಂದು ಯುವಕ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ನೊಂದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ರಾಮನಗರದ ಬಳಿ ನಡೆದಿದೆ.

ಚಾಲಕ ಹರೀಶ ಮೇಸ್ತಾ (24) ಆತ್ಮಹತ್ಯೆ ಮಾಡಿಕೊಂಡವ. ಪ್ರೀತಿಸುತ್ತಿದ್ದ ಯುವತಿಯನ್ನೇ ಮದುವೆಯಾಗಬೇಕೆಂದುಕೊಂಡಿದ್ದ. ಆದರೆ ಯುವತಿ ಇತ್ತೀಚೆಗೆ ಆತನಿಂದ ದೂರವಾಗಿದ್ದಳು. ಇದರಿಂದ ನೊಂದಿದ್ದ ಆತ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *