Menu

ಪ್ರೀತಿ, ಸೆಕ್ಸ್‌, ಮದುವೆ ಭರವಸೆಯಿತ್ತು ಜಿಎಸ್‌ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾತ ಅರೆಸ್ಟ್‌

ಬೆಂಗಳೂರಿನಲ್ಲಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್‌ ಎಂದು ನಂಬಿಸಿ ಬಳಿಕ ಬ್ಲ್ಯಾಕ್‌ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇದೇ ರೀತಿ 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ವಂಚಿಸಿದ್ದ ಎಂಬ ವಿಚಾರ ಬಯಲಾಗಿದೆ.

ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪುಲಿಕೇಶಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆರಂಭದಲ್ಲಿ ಕೆಲಸದ ನಿಮಿತ್ತ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸುತ್ತಿದ್ದ ಈತ, ಬಳಿಕ ಡಿನ್ನರ್, ಲಂಚ್ ಎಂದು ಹತ್ತಿರವಾಗುತ್ತಿದ್ದ. ಮುಂದೆ ಪ್ರೀತಿ ಮತ್ತು ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ. ದೈಹಿಕ ಸಂಪರ್ಕವನ್ನೇ ಮುಂದಿಟ್ಟು ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸುತ್ತಿದ್ದ. ಅಧಿಕಾರಿಗಳ ಇಲಾಖೆಯ ಒಳಗಿನ ಲೋಪಗಳನ್ನು ತಿಳಿದುಕೊಂಡು ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದ. ಲೈಂಗಿಕ ಸಂಪರ್ಕದ ನಂತರ ವೀಡಿಯೊ ಅಥವಾ ಪೋಟೋಗಳನ್ನು ಬಳಸಿ ಬೆದರಿಸುತ್ತಿದ್ದ. ಅಧಿಕಾರಿಗಳನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಪೊಲೀಸರು ವಿಚಾರಣೆ ನಡೆಸಬೇಕಾದರೆ ಮೆಡಿಕಲ್ ಟೆಸ್ಟ್ ಮಾಡಿಸುವ ವೇಳೆ ಆಸ್ಪತ್ರೆಯಲ್ಲಿ ರಂಪಾಟ ಮಾಡಿರುವ ಆರೋಪಿ, ಪೊಲೀಸರ ಮೊಬೈಲ್ ಕಸಿದುಕೊಂಡು ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *