ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ.
ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ ಮಹಿಳೆಗೆ ನಿನ್ನ ಹಾಗೂ ಮಕ್ಕಳ ಅಶ್ಲೀಲ ಪೋಟೊ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತೇನೆಂದು ಬೆದರಿಕೆ ಒಡ್ಡಿ 1.5 ಲಕ್ಷ ಪಡೆದುಕೊಂಡಿದ್ದ.
ಆರೋಪಿಯು ಮತ್ತೆ ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣ ಬೇಸತ್ತ ಗೃಹಿಣಿ ಹುಣಸೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಗದಗ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ವೀರೇಶ್‌ಕುಮಾರನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.